HomeKarnataka Newsಕರ್ನಾಟಕದ ಈ ಜಿಲ್ಲೆಗಳಲ್ಲಿ ಆ. 27ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆ!

ಕರ್ನಾಟಕದ ಈ ಜಿಲ್ಲೆಗಳಲ್ಲಿ ಆ. 27ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆ!

For Dai;y Updates Join Our whatsapp Group

Spread the love

ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 27 ರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಕೂಡಾ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದ್ದರೂ, ಬಿಸಿಲು ಕೂಡ ಇದೆ. ಎಚ್​​ಎಎಲ್​​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!