ಬೆಂಗಳೂರು: ರಾಜ್ಯದ ಜನರಿಗೆ ಕಹಿಸುದ್ದಿ ಒಂದಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಕಾಡಲಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 17 ಹಾಗೂ ಮೇ 18ರಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ,
ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.