ಬೀದರ್:- ಧಾರಾಕಾರ ಮಳೆ ಹಿನ್ನೆಲೆ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆಯಾ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೊಡಗಿನ ಶಾಲೆಗಳಿಗೆ ರಜೆ:
ಇಂದು ಕೊಡಗಿನ ಶಾಲೆ, ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಬೀದರ್ ಜಿಲ್ಲೆಯಾದ್ಯಂತ ರಜೆ ಘೋಷಣೆ:
ಬೀದರ್ ಜಿಲ್ಲೆಯಾದ್ಯಂತ ನಿರಂತರ ಮಳೆ, ನೆರೆ ಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ,:
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವಂತೆ ಹವಾಮಾನ ಸೂಚನೆ ನೀಡಿದೆ.