Rain News: ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

0
Spread the love

ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here