ಬೆಂಗಳೂರಿನಲ್ಲಿ ನಾಳೆಯಿಂದ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆಯಿಂದ ಭಾರೀ ಮಳೆ ಆಗಲಿದ್ದು, ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರತೀಯ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Advertisement

ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here