ಬೆಂಗಳೂರಿನಲ್ಲಿ ಧಾರಾಕಾರ ಮಳೆ: ನೆಲಕಚ್ಚಿದ ಬೃಹತ್ ಮರ, ಜನಜೀವನ ಅಸ್ತವ್ಯಸ್ತ!

0
Spread the love

ಬೆಂಗಳೂರು:- ನಗರದಲ್ಲಿ ಸುರಿದ ಮಳೆ ಅವಾಂತರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

Advertisement

ಬುಧವಾರ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನ ರಾಜಾಜಿನಗರ 4ನೇ ಬ್ಲಾಕ್‌ನಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಐದು ಕಾರ್, ಟಾಟಾ ಏಸ್, ಮೂರ್ನಾಲ್ಕು ಬೈಕ್ ಹಾಗೂ ಎರಡು ಮನೆಗಳ ಮನೆ ಬಿದ್ದಿದೆ. ಚಂದ್ರಮ್ಮ ಹಾಗೂ ಪೀಟರ್ ಎಂಬುವರ ಮನೆಗೆ ದಿಗ್ಭಂಧನ ಹಾಕಿದಂತಾಗಿದ್ದು, ಪರಿಣಾಮ ಮನೆಯಿಂದ ಹೊರಬರಲಾರದೆ ಅಸಹಾಯಕ ಸ್ಥಿತಿಯಲ್ಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದರೂ ಕೂಡ ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಬಾರದೇ ನಿರ್ಲಕ್ಷಿಸಿದ್ದಾರೆ. ವಿದ್ಯತ್‌ ಕಂಬ ಕೂಡ ಬಾಗಿದ್ದು, ಬೆಸ್ಕಾಂ ಸಿಬ್ಬಂದಿ ಕರೆಂಟ್ ಸಂಪರ್ಕವನ್ನು ಕೂಡ ಕಡಿತಗೊಳಿಸಿಲ್ಲ ಎನ್ನಲಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೂ ಗುಡುಗು ಸಹಿತ ಮಳೆಯಾಗಿದೆ. ಎಚ್​​ಎಎಲ್​​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.6 ಡಿಗ್ರಿ ಸೆಲ್ಸಿಯಸ್ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here