ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿ ಹಲವೆಡೆ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಆ.16ರವರೆಗೆ ಧಾರಾಕಾರ ಮಳೆಯಾಗಲಿದೆ.
ಕಳೆದ 2-3 ದಿನಗಳಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಮಧ್ಯಾಹ್ನದ ವೇಳೆಗೆ ಮಳೆ ಅಬ್ಬರಿಸುವ ನಿರೀಕ್ಷೆಯಿದೆ. ಮುಂದಿನ ಐದು ದಿನಗಳ ಕಾಲ ಇದೇ ಸ್ಥಿತಿ ಮುಂದುವರೆಯುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.