ಬೆಂಗಳೂರು:- ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಶುಕ್ರವಾರ ದಿ.13ರಂದು ರಜೆ ಘೋಷಣೆ ಮಾಡಿ ಆಯಾ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅದರಂತೆ ಧಾರವಾಡ, ಉಡುಪಿ, ಕೊಡುಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತಗಳು ರಜೆ ಘೋಷಿಸಿವೆ.
ಧಾರವಾಡದಲ್ಲಿ ರಜೆ ಘೋಷಣೆ;
ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದು, ರೆಡ್ ಅಲರ್ಟ್ ಘೋಷಿಸಿದ್ದಾರೆ.
ಕೊಡಗಿನಲ್ಲೂ ರಜೆ ಘೋಷಣೆ:
ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ದಿ.13ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಜಟರಾಜಾ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್, ಶಾಲೆ ರಜೆ:
ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿನ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು ಅಂಗನವಾಡಿ ಕೇಂದ್ರಗಳಿಗೆ ರಜೆ:
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.