ಕರ್ನಾಟಕದಲ್ಲಿ ಜೂ.13 ರಿಂದ ಮಳೆ ಹೆಚ್ಚಳ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಜೂ. 13 ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಭಾರತೀಯ ಹವಾಮಾನ ಇಲಾಖೆಯು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

Advertisement

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here