HomeKarnataka Newsಕರ್ನಾಟಕದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.

ಗಣೇಶ ಚತುರ್ಥಿ ಬಳಿಕ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇನ್ನೂ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ,

ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಕೋಲಾರ, ಆಗುಂಬೆ, ಸಿದ್ದಾಪುರ, ಲೋಂಡಾ, ಕದ್ರಾ, ಗೇರುಸೊಪ್ಪ, ಕ್ಯಾಸಲ್‌ರಾಕ್, ಬೆಂಗಳೂರು ಕೆಐಎಎಲ್, ಝಲ್ಕಿ, ಶೃಂಗೇರಿ, ಸಿಂಧನೂರು, ಶಕ್ತಿನಗರ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಹೊಸಕೋಟೆ, ಹೊನ್ನಾವರ, ದಾವಣಗೆರೆ, ಬಂಟವಾಳ ಸೇರಿದಂತೆ ಅನೇಕ ಕಡೆ ಮಳೆಯಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!