ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಅದರಂತೆ ಇನ್ನೂ ಕೆಲವು ದಿನ ಧಾರಕಾರ ಮಳೆ ಅಬ್ಬರ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಎಚ್ಎಎಲ್ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.