HomeKarnataka Newsಆ.19 ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ: ಇಲ್ಲೆಲ್ಲಾ ಯೆಲ್ಲೋ ಅಲರ್ಟ್​​!

ಆ.19 ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ: ಇಲ್ಲೆಲ್ಲಾ ಯೆಲ್ಲೋ ಅಲರ್ಟ್​​!

For Dai;y Updates Join Our whatsapp Group

Spread the love

ಬೆಂಗಳೂರು:– ಆ.19 ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಆಗಸ್ಟ್​ 19ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿತ್ಯವೂ ಮಳೆಯಾಗುತ್ತಿದೆ, ಇಂದು ಕೂಡ ಮೋಡಕವಿದ ವಾತಾವರಣವಿದ್ದು, ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಎಚ್​​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!