ಕರ್ನಾಟಕದಲ್ಲಿ ಜುಲೈ 7ರವರೆಗೂ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಜುಲೈ 7ರವರೆಗೂ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here