ಕರ್ನಾಟಕದಲ್ಲಿ ಜೂ.19 ರವರೆಗೆ ಭಾರೀ ಮಳೆ: ಇಂದು ಈ ನಾಲ್ಕು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಜೂನ್ 19 ರವರೆಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ:

ಇನ್ನೂ ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು,ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್​ಆರ್​​​ ಪುರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುತ್ತೋಲೆ ಹೊರಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here