ಕರ್ನಾಟಕದಲ್ಲಿ ಅ.1ರವರೆಗೆ ಭಾರೀ ಮಳೆ: ಈ ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
Spread the love

ಬೆಂಗಳೂರು:– ಕರ್ನಾಟಕದಾದ್ಯಂತ ಅಕ್ಟೋಬರ್​ ಮೊದಲ ವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗದಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಇಂದು ಕೂಡ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 27.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here