ಬೆಂಗಳೂರು:- ಮುಂಗಾರಿಗೂ ಮುನ್ನವೇ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದ್ದು, ರಾಜಧಾನಿ ಬೆಂಗಳೂರಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ಅದರಂತೆ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


