ಬೆಂಗಳೂರು:- ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ ಮುಂದುವರಿದಿದ್ದು, ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ಬೀದರ್, ಯಾದಗಿರಿ ಈ ಜಿಲ್ಲೆಗಳು ಸೇರಿದಂತೆ ಉತ್ತರ ಕನ್ನಡದಲ್ಲಿ 30-40 ಕೀಮೀ ಗಾಳಿಯ ವೇಗದೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲೂ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಶೇ. 55 ರಷ್ಟು ಮಳೆಯಾಗುವ ಸಾಧ್ಯತೆ ಮತ್ತು ಶೇ. 33 ರಷ್ಟು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣವಿರಲಿದೆ. ನಗರದ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


