ಚಿಕ್ಕೋಡಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ. ವೇದಗಂಗಾ, ದೂದಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆರು ಸಂಪರ್ಕ ಸೇತುವೆಗಳು ಒಂದು ತಿಂಗಳಲ್ಲಿ ಮೂರನೇ ಬಾರಿಗೆ ಮುಳುಗಡೆಯಾಗಿದೆ.
Advertisement
ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ ಸೇತುವೆಗಳು ಹಾಗೂ ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್, ಬೋಜವಾಡಿ-ಕುನ್ನೂರ, ಬೋಜ್-ಕುನ್ನೂರ, ಮಲ್ಲಿಕವಾಡ-ದತ್ತವಾಡ ಸೇತುವೆಗಳು ಮುಳುಗಡೆಯಾಗಿವೆ. ಸೇತುವೆ ಎರಡು ಬದಿಯಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ನಿಷೇಧ ಮಾಡಿದ್ದು, ನದಿ ಪಾತ್ರದಲ್ಲಿ ಜನರಲ್ಲಿ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ.