ಕರ್ನಾಟಕದ ಹಲವೆಡೆ ಏಪ್ರಿಲ್ 27ರ ಬಳಿಕ ಭಾರಿ ಮಳೆ: ಹವಾಮಾನ ವರದಿ ಹೀಗಿದೆ!

0
Spread the love

ಬೆಂಗಳೂರು:- ಕರ್ನಾಟಕದ ಹಲವೆಡೆ ಏಪ್ರಿಲ್ 27ರ ಬಳಿಕ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಅದರಂತೆ ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನೂ ಬೆಂಗಳೂರಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ. ಎಚ್​ಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here