ಉತ್ತರ ಕರ್ನಾಟಕದಲ್ಲಿ ಧಾರಾಕಾರ ಮಳೆ: ಅಧಿಕಾರಿಗಳಿಗೆ ತುರ್ತು ಕ್ರಮಕ್ಕೆ ಸಿಎಂ ಸೂಚನೆ

0
Spread the love

ಬೆಂಗಳೂರು:- ಉತ್ತರ ಕರ್ನಾಟಕ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮತ್ತು ತುರ್ತು ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ.

Advertisement

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸುವಂತೆ ಕಲಬುರಗಿ, ವಿಜಯಪುರ, ಯಾದಗಿರಿ ಸೇರಿದಂತೆ ಬೀದರ್ ಜಿಲ್ಲೆಗಳಲ್ಲಿ ಅಗತ್ಯ ತುರ್ತು ಕ್ರಮಕ್ಕೆ ನಾಲ್ಕೂ ಜಿಲ್ಲೆಗಳ ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಡಿಸಿ ಮತ್ತು ಜಿಲ್ಲಾ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಬೇಕು. ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು ಎಂದಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here