ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರಸ್ತುತ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ವ್ಯಾಪ್ತಿಯ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ.
Advertisement
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಇಂದು ಮತ್ತು ನಾಳೆ ಬಿರುಸಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಸೆ.3ರಿಂದ ಮುಂದಿನ 2 ದಿನ ಇನ್ನಷ್ಟು ಮಳೆಯಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ಕಲಬುರಗಿ, ವಿಜಯಪುರ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸೆಪ್ಟೆಂಬರ್ 3ರಂದು ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರ ವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.