ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಳಗಾವಿ, ಬೀದರ್, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ದಿನವೂ ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.










