HomeKarnataka Newsಭಾರೀ ಮಳೆ: ಚಿಕ್ಕಮಗಳೂರಿನಲ್ಲಿ 30 ಅಡಿ ಪ್ರಪಾತಕ್ಕೆ ಉರುಳಿದ KSRTC ಬಸ್!

ಭಾರೀ ಮಳೆ: ಚಿಕ್ಕಮಗಳೂರಿನಲ್ಲಿ 30 ಅಡಿ ಪ್ರಪಾತಕ್ಕೆ ಉರುಳಿದ KSRTC ಬಸ್!

For Dai;y Updates Join Our whatsapp Group

Spread the love

ಚಿಕ್ಕಮಗಳೂರು:- ಭಾರೀ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ಸೊಂದು 30 ಅಡಿ ಪ್ರಪಾತಕ್ಕೆ ಉರುಳಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ‌ ಸಮೀಪದ ಜಲದುರ್ಗಾ ಬಳಿ ಜರುಗಿದೆ.

ಕೆಎಸ್​ಆರ್​ಟಿಸಿ ಬಸ್​ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೊಪ್ಪ ಮತ್ತು ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಬಸ್ ಬಿದ್ದ ಪರಿಣಾಮ ಪುಟ್ಟಪ್ಪ ಪೂಜಾರಿ ಅವರಿಗೆ ಸೇರಿದ ಮನೆ ಸಂಪೂರ್ಣ ಜಖಂಗೊಂಡಿದೆ.

ಬಸ್​ನಲ್ಲಿ 60 ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಈ ಬಸ್ ​ ಬೆಂಗಳೂರು ಡಿಪೋಗೆ ಸೇರಿದೆ ಎಂದು ತಿಳಿದುಬಂದಿದೆ. ಕೂಡಲೇ ಸ್ಥಳಕ್ಕೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಭೇಟಿ ನೀಡಿ ಮಾಹಿತಿ ಪಡೆದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!