HomeBengaluru Newsಕರ್ನಾಟಕದಲ್ಲಿ ವರುಣನ ಅಬ್ಬರ; ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಕರ್ನಾಟಕದಲ್ಲಿ ವರುಣನ ಅಬ್ಬರ; ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

For Dai;y Updates Join Our whatsapp Group

ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಬರ ಪರಿಸ್ಥಿತಿ ಎದುರಿಸುತ್ತಿರುವ ಬೆನ್ನಲ್ಲೇ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 25ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 26ರಂದು ಕೂಡ ಕರಾವಳಿಯ ಕೆಲವೆಡೆ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲೂ ಮಳೆ ಸಾಧ್ಯತೆ:

ಹಾವೇರಿ, ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಮಳೆ ಕೊಂಚ ನೆಮ್ಮದಿ ತರಬಹುದು.

ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಮಳೆಯ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img