ಬೆಂಗಳೂರು:– ಕರ್ನಾಟಕದಲ್ಲಿ ಚುರುಕುಗೊಂಡಿರುವ ಮುಂಗಾರು ಮಳೆ, ಮತ್ತಷ್ಟು ತನ್ನ ಆರ್ಭಟ ಹೆಚ್ಚಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಮತ್ತೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಆರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಧಾರವಾಡ, ಬೆಳಗಾವಿ, ಹಾವೇರಿ, ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರಿಸಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.