• About
  • Advertise
  • Privacy & Policy
  • Contact
Friday, October 23, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು, ಕೋಲಾರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ

Vijaya Sakshi by Vijaya Sakshi
October 23, 2026
in Karnataka News
0
ಮುಂಗಾರು ಮತ್ತೆ ಚುರುಕು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ!
0
SHARES
0
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆಯ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯೂ ಇದೆ.

ಅಕ್ಟೋಬರ್ 23 ಮತ್ತು 24ರಂದು ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದರೆ, ಉಡುಪಿ ಜಿಲ್ಲೆಯಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗಬಹುದು. ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಉತ್ತರ ಒಳನಾಡಿನ ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅಕ್ಟೋಬರ್ 23ರಂದು ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಬಲವಾದ ಗಾಳಿಯೂ ಬೀಸಬಹುದು. ಉಳಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 23ರಂದು ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಬಹುದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಅಕ್ಟೋಬರ್ 24ರಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಬಹುದು. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಒಟ್ಟಾರೆ, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು. ಬಲವಾದ ಗಾಳಿ ಬೀಸುವ ವೇಳೆ ವಿದ್ಯುತ್ ಕಂಬಗಳು ಹಾಗೂ ಅಪಾಯಕಾರಿ ಕಟ್ಟಡಗಳಿಂದ ದೂರವಿರಬೇಕು. ಸಾರ್ವಜನಿಕರು ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.

Tags: Bengaluru RainBreakingNewsHeavy Rain ForecastIMD AlertKarnatakaKarnataka Rain AlertKarnataka Weather UpdateMysuru RainNewsHeadlinesVijayasakshivijayasakshinews
Previous Post

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

Next Post

ಟಿಬೆಟ್ ನಲ್ಲಿ ಭೀಕರ ಭೂಕಂಪಕ್ಕೆ 18 ಮಂದಿ ಬಲಿ! 46 ಜನರಿಗೆ ಗಾಯ, ನೂರಾರು ಮನೆಗಳಿಗೆ ಹಾನಿ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಟಿಬೆಟ್ ನಲ್ಲಿ ಭೀಕರ ಭೂಕಂಪಕ್ಕೆ 18 ಮಂದಿ ಬಲಿ! 46 ಜನರಿಗೆ ಗಾಯ, ನೂರಾರು ಮನೆಗಳಿಗೆ ಹಾನಿ

ಟಿಬೆಟ್ ನಲ್ಲಿ ಭೀಕರ ಭೂಕಂಪಕ್ಕೆ 18 ಮಂದಿ ಬಲಿ! 46 ಜನರಿಗೆ ಗಾಯ, ನೂರಾರು ಮನೆಗಳಿಗೆ ಹಾನಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

October 23, 2026
ಟಿಬೆಟ್ ನಲ್ಲಿ ಭೀಕರ ಭೂಕಂಪಕ್ಕೆ 18 ಮಂದಿ ಬಲಿ! 46 ಜನರಿಗೆ ಗಾಯ, ನೂರಾರು ಮನೆಗಳಿಗೆ ಹಾನಿ

ಟಿಬೆಟ್ ನಲ್ಲಿ ಭೀಕರ ಭೂಕಂಪಕ್ಕೆ 18 ಮಂದಿ ಬಲಿ! 46 ಜನರಿಗೆ ಗಾಯ, ನೂರಾರು ಮನೆಗಳಿಗೆ ಹಾನಿ

October 23, 2026
ಮುಂಗಾರು ಮತ್ತೆ ಚುರುಕು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ!

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು, ಕೋಲಾರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ

October 23, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

October 23, 2026
ಟಿಬೆಟ್ ನಲ್ಲಿ ಭೀಕರ ಭೂಕಂಪಕ್ಕೆ 18 ಮಂದಿ ಬಲಿ! 46 ಜನರಿಗೆ ಗಾಯ, ನೂರಾರು ಮನೆಗಳಿಗೆ ಹಾನಿ

ಟಿಬೆಟ್ ನಲ್ಲಿ ಭೀಕರ ಭೂಕಂಪಕ್ಕೆ 18 ಮಂದಿ ಬಲಿ! 46 ಜನರಿಗೆ ಗಾಯ, ನೂರಾರು ಮನೆಗಳಿಗೆ ಹಾನಿ

October 23, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link