ದಾವಣಗೆರೆ: ಭಾರೀ ಗಾತ್ರದ ವಾಹನ ಸಂಚಾರದಿಂದ ರಸ್ತೆ ಕುಸಿತವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದುರೆ – ದೊಡ್ಡಘಟ್ಟ ರಸ್ತೆಯಲ್ಲಿ ನಡೆದಿದೆ. ಭಾರೀ ಗಾತ್ರದ ವಾಹನಗಳಿಂದ ರಸ್ತೆ ಸಂಪೂರ್ಣ ಕುಸಿತವಾಗಿದ್ದು, ಇದೀಗ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
Advertisement
ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ರೈತರು ಭತ್ತ ಸಾಗಾಣಿಕೆಗೂ ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಕಳಪೆ ಕಾಮಗಾರಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ರಸ್ತೆ ದುರಸ್ತಿ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.