Lakshmi Hebbalkar Car Accident: ಹೆಬ್ಬಾಳ್ಕರ್ ಕಾರು ಅಪಘಾತ: ಸಿ.ಟಿ.ರವಿ ರಿಯಾಕ್ಷನ್ ಏನೂ ಗೊತ್ತಾ..?

0
Spread the love

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಅಪಘಾತವಾಗಿದೆ. ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ಅಪಘಾತ ಸಂಭವಿಸಿದೆ. ಇನ್ನೂ ಈ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್‌ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.

Advertisement

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

ಇತ್ತಿಚಿಗೆ ಡೆದ ವಿಧಾನಮಂಡಲ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತು ಎಂಎಲ್‌ಸಿ ಸಿ.ಟಿ.ರವಿ ನಡುವೆ ರಾಜಕೀಯ ಘರ್ಷಣೆಯಾಗಿತ್ತು. ಸದನದಲ್ಲೇ ಸಚಿವೆಯನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ ಆರೋಪ ಸಿ.ಟಿ.ರವಿ ಅವರ ಮೇಲಿತ್ತು. ಇದು ಎರಡೂ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು. ತನ್ನ ಮೇಲೆ ಅವಾಚ್ಯ ಪದ ಬಳಕೆ ಮಾಡಲಾಗಿದೆ ಎಂದು ಸಚಿವೆ ಕಣ್ಣೀರಿಟ್ಟಿದ್ದರು.


Spread the love

LEAVE A REPLY

Please enter your comment!
Please enter your name here