ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ರಾಜ್ಯದಲ್ಲಿ ಹೈಅಲರ್ಟ್‌: ಕಮಿಷನರ್ ದಯಾನಂದ್ ಹೇಳಿದ್ದೇನು..?

0
Spread the love

ಬೆಂಗಳೂರು: ಪಾಕಿಸ್ತಾನದ ವಿಫಲ ದಾಳಿಗಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡುತ್ತಿದ್ದು, ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಆಕಾಶದಲ್ಲೇ ನಾಶಪಡಿಸಿದೆ. ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಪೊಲೀಸ್​ ಇಲಾಖೆ ಅಲರ್ಟ್ ಆಗಿದೆ.

Advertisement

ಈ ಸಂದರ್ಭದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಸೂಚನೆ ನೀಡಿದ್ದಾರೆ. ನಗರದ ಎಲ್ಲಾ ಕಡೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಅವಶ್ಯ ಸಾಮಾಗ್ರಿ ಶೇಖರಿಸಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲಾ ಕಡೆ ಸಾಮಾನ್ಯವಾದ ಭದ್ರತೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಎಲ್ಲಾ ಪೊಲೀಸರಿಗೂ ತಿಳಿದಿದೆ. ಪೊಲೀಸರು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಜನರು ಆತಂಕಕ್ಕೆ ಒಳಗಾಗದ ರೀತಿ ತಿಳಿವಳಿಕೆ ನೀಡಬೇಕು. ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಬೆಂಗಳೂರಿನಲ್ಲಿ ಡಿಸಿಪಿಗಳು ಹಾಗೂ ಎಸಿಪಿಗಳು ನಿಗಾ ವಹಿಸಬೇಕು. ಕೇಂದ್ರ, ರಾಜ್ಯ ಸರ್ಕಾರದ ಸೂಚನೆ ಪಾಲಿಸಬೇಕು. ಮಾಕ್ ಡ್ರಿಲ್ ಬಗ್ಗೆ ಜನರಿಗೆ ಪೊಲೀಸರು ಅರಿವು ಮೂಡಿಸಬೇಕು ಎಂದು ಹಲವು ಸೂಚನೆಗಳನ್ನು ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here