ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಹೈಕಮಾಂಡ್ ಇದೆ: ಜಿ ಪರಮೇಶ್ವರ್

0
Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಹೈಕಮಾಂಡ್ ಇದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಹೈಕಮಾಂಡ್ ಇದೆ. ಈಗಾಗಲೇ ‌ವೇಣುಗೋಪಾಲ್ ಮತ್ತು ಸುರ್ಜೇವಾಲಾ ಇಬ್ಬರೂ‌ ಹೇಳಿಕೆ ನೀಡಿದ್ದಾರೆ ಎಂದರು.

Advertisement

ಇನ್ನ ಸಿದ್ದರಾಮಯ್ಯ ವೀಕ್ ಆದಂತೆ ಕಾಣಿಸುತ್ತಾರಲ್ವಾ? ಎಂಬ ಪ್ರಶ್ನೆಗೆ, ಸಿಎಂ ಗುಂಡುಕಲ್ಲು ಇದ್ದಂತೆ ಇದ್ದಾರೆ. ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ರಾಜ್ಯಪಾಲರು ಅವರ ಶಕ್ತಿಯನ್ನು ಎಚ್‌ ಡಿ ಕುಮಾರಸ್ವಾಮಿ ಮತ್ತು ಮುರುಗೇಶ್ ನಿರಾಣಿ ವಿಚಾರದಲ್ಲೂ ತೋರಿಸಬೇಕು ಎಂದು ಸವಾಲು ಹಾಕಿದರು.

ಇನ್ನೂ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ. ನಾನು ಕೂಡ ಸ್ಪಷ್ಟಪಡಿಸುತ್ತಿದ್ದೇನೆ. 40 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಯಾವುದೇ ಆರೋಪ ಇರಲಿಲ್ಲ. ಈಗ ಸಹಜವಾಗಿ ಅವರಿಗೆ ನೋವಾಗುತ್ತದೆ. ಅದರೆ ನಾವು ಇದನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದರು.


Spread the love

LEAVE A REPLY

Please enter your comment!
Please enter your name here