ಇತ್ತೀಚೆಗೆ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್ನ ಬೆಲೆ ಅಂದರೆ 200 ರೂಪಾಯಿ ನಿಗದಿಪಡಿಸಿ ಆದೇಶ ಹೊರಡಿಸಲಾಗಿತ್ತು. ಸರ್ಕಾರ ನಿಗದಿಪಡಿಸಿದ್ದ 200 ರೂಪಾಯಿ ಟಿಕೆಟ್ ದರವನ್ನು ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಇದೀಗ ಈ ಆದೇಶಕ್ಕೆ ಹೈಕೋರ್ಟ್ ಮದ್ಯಂತರ ತಡೆ ನೀಡಿದೆ.
ಮಲ್ಟಿಪ್ಲೆಕ್ಸ್ಗಳಲ್ಲಿ ಟಿಕೆಟ್ ದರವನ್ನು ಬೇಕಾಬಿಟ್ಟಿ ನಿಗದಿ ಮಾಡಲಾಗುತ್ತಿತ್ತು. ಇದರಿಂದ ಸಾಮಾನ್ಯ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದರು. ಈ ಕಾರಣದಿಂದ ಜನರು ಥಿಯೇಟರ್ನತ್ತ ಮುಖ ಮಾಡುತ್ತಿಲ್ಲ ಎಂದು ಹೇಳಲಾಗಿತ್ತು. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಿಂಗಲ್ ಸ್ಕ್ರೀನ್ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ಟಿಕೆಟ್ನ ಮೂಲ ಬೆಲೆ 200 ರೂಪಾಯಿ ಜೊತೆಗೆ ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ನಿಗದಿ ಮಾಡಲು ಮಾತ್ರ ಅವಕಾಶ ಇತ್ತು. ಹೊಸ ಆದೇಶವು ಸೆಪ್ಟೆಂಬರ್ 12ರಂದು ಜಾರಿಗೆ ಬಂದಿತ್ತು. ಎರಡು ವಾರ ಕಳೆಯುವುದರೊಳಗೆ ಆದೇಶಕ್ಕೆ ಬ್ರೇಕ್ ಬಿದಿದ್ದು ಇದರಿಂದ ಕಾಂತಾರ ಚಿತ್ರತಂಡಕ್ಕೆ ಖುಷಿಯಾಗಿದೆ.
ಸಿದ್ದು ಸರ್ಕಾರದ 200 ರೂಪಾಯಿ ನಿಗದಿ ವಿರುದ್ಧ ವಿರೋಧ ಕೂಡ ವ್ಯಕ್ತವಾಗಿತ್ತು. ಬಿಗ್ ಬಜೆಟ್ ಸಿನಿಮಾಗಳಿಗೆ ಇದರಿಂದ ತೊಂದರೆ ಆಗಲಿದೆ ಎಂಬ ಚರ್ಚೆ ಶುರುವಾಯ್ತು. ಕೊನೆಗೆ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಆಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ನ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಪೀಠವು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ.