ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

0
Spread the love

ಬೆಂಗಳೂರು: ಕನ್ನಡಿಗರ ಭಾಷಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ್ದ ಗಾಯಕ ಸೋನು ನಿಗಂ ವಿರುದ್ಧ ದೂರು ದಾಖಲಾಗಿದ್ದು, ಇದೀಗ ಸೋನು ನಿಗಂ ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಅರ್ಜಿಯ ವಿಚಾರಣೆ ನಡೆದಿದ್ದು, ಸೋನು ನಿಗಂ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ.

Advertisement

ಅರ್ಜಿದಾರ ಸೋನು ನಿಗಮ್‌ ಅವರನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಒಳಪಡಿಸಬಹುದು. ಇಲ್ಲವೇ, ಗಾಯಕನ ವೆಚ್ಚದಲ್ಲಿ ತನಿಖಾಧಿಕಾರಿಗಳು ಅವರಿರುವ ಸ್ಥಳಕ್ಕೆ ತೆರಳಿ ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಬಹುದು ಎಂದು ನ್ಯಾಯಪೀಠ ತಿಳಿಸಿದೆ.

ತಮ್ಮ ವಿರುದ್ಧ ಆವಲಹಳ್ಳಿಯ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಸೋನು ನಿಗಮ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್‌ ಅಮರಣ್ಣನವರ್‌ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಅರ್ಜಿದಾರರು ನೀಡಿರುವ ಹೇಳಿಕೆ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ. ಆದ್ದರಿಂದ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಅವರು ಹೇಳಿಕೆ ನೀಡಿದ ಸ್ಥಳ ಮಹಜರ್‌ ಮಾಡಬೇಕಾಗಿದೆ. ಆದ್ದರಿಂದ ಅರ್ಜಿ ಪುರಸ್ಕರಿಸಬಾರದು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿದಾರರು ನೀಡಿರುವ ಹೇಳಿಕೆ ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಗೊತ್ತಾಗಿದೆ. ಅವರ ವಿರುದ್ದ ಯಾವ ತನಿಖೆ ಮಾಡಬೇಕು, ಏನು ಮಹಜರ್‌ ಮಾಡಬೇಕು ಎಂದು ಪ್ರಶ್ನಿಸಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳಬಹುದು ಎಂದು ತಿಳಿಸಿತು.

 


Spread the love

LEAVE A REPLY

Please enter your comment!
Please enter your name here