ತುಳುನಾಡಿನ ದೈವ ಕುರಿತು ಅವಮಾನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಿತು.
ಕಾಂತಾರಾ ಚಾಪ್ಟರ್–1 ಚಿತ್ರದ ಪಾತ್ರದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾದ ದೂರಿನ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆ ನಡೆದಿದ್ದು, ಈ ವೇಳೆ ರಣವೀರ್ ಸಿಂಗ್ ಪರ ವಕೀಲ ಸಜನ್ ಪೂವಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ, ಇರಾನ್–ಇಸ್ರೇಲ್ ಯುದ್ಧ ಪರಿಸ್ಥಿತಿಯಿಂದಾಗಿ ನಟರು ಇಂಗ್ಲೆಂಡ್‌ನಲ್ಲೇ ಸಿಲುಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಸರ್ಕಾರದ ಪರ ಎಸ್‌ಪಿಪಿ ಜಗದೀಶ್ ಅವರು ನಟರಿಗೆ ನೋಟಿಸ್ ನೀಡಲಾಗಿದ್ದು, ಅವರು ಕಾಲಾವಕಾಶ ಕೇಳಿದ್ದಾರೆ ಎಂದು ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ, ಹೈಕೋರ್ಟ್ ರಣವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿ, ಅರ್ಜಿ ವಿಚಾರಣೆಯನ್ನು ಮಾರ್ಚ್ 9ಕ್ಕೆ ಮುಂದೂಡಿದೆ.



