ಸುಳ್ಳು ಮಾಹಿತಿ ಹರಡಿದ ಆರೋಪ: ತೇಜಸ್ವಿ ಸೂರ್ಯ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

0
Spread the love

ಬೆಂಗಳೂರು: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದು ಮಾಡಿ ಆದೇಶ ನೀಡಿದೆ.

Advertisement

ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸಂಸದ ತೇಜಸ್ವಿ ಸೂರ್ಯ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ನಾಗಪ್ರಸನ್ನ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತ್ತು. ಇಂದು ತೀರ್ಪು ನೀಡಿದ್ದು, ಸಂಸದರ ಮೇಲಿನ ಸುಳ್ಳು ಸುದ್ದಿ ಹರಡುವಿಕೆ ಪ್ರಕರಣವನ್ನು ರದ್ದು ಮಾಡಿದೆ.

ತೇಜಸ್ವಿ ಸೂರ್ಯ ಟ್ವೀಟ್​​ನಲ್ಲೇನಿತ್ತು?

ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು.

 


Spread the love

LEAVE A REPLY

Please enter your comment!
Please enter your name here