ಬೆಂಗಳೂರು: ಮಹೇಶ್ ತಿಮರೋಡಿಗೆ ಹೈಕೋರ್ಟ್ ರಿಲೀಫ್ ನೀಡಿದ್ದು, ಹಿಂದಿನ ಗಡಿಪಾರು ಆದೇಶವನ್ನು ರದ್ದು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಲಾಗಿದ್ದ ಮಹೇಶ್ ತಿಮರೋಡಿಯ ಅರ್ಜಿ ನ್ಯಾ. ಸೂರಜ್ ಗೋವಿಂದರಾಜು ಪೀಠದಲ್ಲಿ ವಿಚಾರಣೆ ಮಾಡಲಾಯಿತು.
ವಿಚಾರಣೆ ವೇಳೆ, ಸೂಕ್ತ ಕಾರಣ, ಸೆಕ್ಷನ್ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.
ಮಹೇಶ್ ತಿಮರೋಡಿಯ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಸೆ. 20ರಂದು ಗಡಿಪಾರು ಆದೇಶ ಹೊರಡಿಸಿದ್ದರು. ಮಹೇಶ್ ತಿಮರೋಡಿ ಈ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.



