ಬೆಂಗಳೂರು: ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ವಿಚಾರದ ಸಂಘರ್ಷ ತಾರಕ್ಕೇರಿದೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸುವ ಮೂಲಕ ಹೈಕೋರ್ಟ್ ಸೂಚನೆ ನೀಡಿದೆ. ಈ ಆದೇಶದಿಂದ ಇಂದು ಚಿತ್ತಾಪುರದಲ್ಲಿ ರ‍್ಯಾಲಿ ನಡೆಸಲು ನಿರ್ಧರಿಸಿದ್ದ ಆರ್ಎಸ್ಎಸ್ ಮತ್ತು ದಲಿತ ಸಂಘಟನೆಗಳಿಗೆ ಸದ್ಯ ಅವಕಾಶ ಇಲ್ಲದಂತಾಗಿದೆ.
ಇಂದು ಪಥ ಸಂಚಲನ ನಡೆಸಲು ಅವಕಾಶ ನೀಡದ ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಜಿಎಸ್ ಕಮಲ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿರುವುದರಿಂದ ಹಲವು ಸಂಘಟನೆಗಳು ಒಂದೇ ದಿನ, ಒಂದೇ ಸ್ಥಳ ಮತ್ತು ಒಂದೇ ಮಾರ್ಗದಲ್ಲಿ ರ‍್ಯಾಲಿ ನಡೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದಾರೆ. ಆದ ಕಾರಣ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳಂದು ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ತಿಳಿಸಿತು.