ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕತಣದ ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ . ಹೈಕೋರ್ಟ್ ನಲ್ಲಿ ನಡೆದ ಅರ್ಜಿ ವಿಚಾರಣೆ ಸೋಮವಾರ (ಡಿಸೆಂಬರ್ 9) 2:30ಕ್ಕೆ ಮುದೂಡಲಾಗಿದೆ. ಈ ಮೂಲಕ ನಟ ದರ್ಶನ್‌ಗೆ ಮತ್ತೆ ಶಾಕ್ ನೀಡಿದೆ.
ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್‌ನ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ದರ್ಶನ್, ಪವಿತ್ರಾ ಗೌಡ ಹಾಗೂ ದರ್ಶನ್ ಅವರ ಕಾರು ಚಾಲಕನ ಪರವಾಗಿ ವಕೀಲರು ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಇಂದು ತನಿಖಾಧಿಕಾರಿಗಳ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಡಿಸೆಂಬರ್ 9 ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.
ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್ ಸೇರಿದಂತೆ ಇನ್ನಿತರೆ ಆರೋಪಿಗಳ ಪರ ವಕೀಲ ಸಿ.ವಿ. ನಾಗೇಶ್ ಅವರು ಬಲವಾಗಿ ವಾದ ಮಂಡನೆ ಮಾಡಿದರು. ಈ ವೇಳೆ ಪ್ರಕರಣದ ಸರ್ಕಾರದ ಪರ ವಕೀಲರಾದ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಮೊದಲು ಪವಿತ್ರಾ ಗೌಡ ಅವರ ವಕೀಲರು ಮಂಡಿಸಿದ ವಾದಗಳಿಗೆ ತಿರುಗೇಟು ನೀಡಿದರು.
ದರ್ಶನ್ ಅನಾರೋಗ್ಯದ ವಿಷಯವಾಗಿ ಅವರ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ಪ್ರಸನ್ನ ಕುಮಾರ್, ದರ್ಶನ್ ಪರ ವಕೀಲರು, ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದಾರೆ, ನ್ಯಾಯಾಲಯದ ದಾರಿ ತಪ್ಪಿಸುವ ಕಾರ್ಯ ಮಾಡಿದ್ದಾರೆ ಎಂದು ವಾದ ಮಂಡಿಸಿದರು. ಅಂತಿಮವಾಗಿ ನ್ಯಾಯಮೂರ್ತಿಗಳು ಪ್ರಕರಣದ ಮುಂದಿನ ವಿಚಾರಣೆಯನ್ನು ಸೋಮವಾರ (ಡಿಸೆಂಬರ್ 09) ಮಧ್ಯಾಹ್ನ 2:30ಕ್ಕೆ ಮುಂದೂಡಿದರು.