ತುಮಕೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಪಥಸಂಚಲನ ಅಥವಾ ಚಟುವಟಿಕೆಗಳನ್ನು ನಿರ್ಬಂಧಿಸಿ ಹೊರಡಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇನ್ನೂ ಈ ವಿಚಾರವಾಗಿ ಮಾಜಿ ಸಚಿವ ಕೆ. ಎನ್. ರಾಜಣ್ಣ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಹೈಕೋರ್ಟ್ನಲ್ಲಿ ತೀರ್ಮಾನ ಆದ ಮೇಲೆ ಪ್ರಶ್ನೆ ಮಾಡುವ ಹಕ್ಕು ಇಲ್ಲ. ಸಾರ್ವಜನಿಕವಾಗಿ ಟೀಕೆ ಮಾಡಲು ಸಾಧ್ಯವಿಲ್ಲ. ಸರ್ಕಾರ ಈ ಸಂಬಂಧ ಹೈಯರ್ ಕೋರ್ಟ್ನಲ್ಲಿ ಅಪೀಲು ಸಲ್ಲಿಸಬಹುದು. ರಾಜ್ಯ ಸರ್ಕಾರದ ತೀರ್ಮಾನಗಳಿಗೂ ಕೆಲವೊಂದು ಬಾರಿ ಈ ರೀತಿ ಆಗಲಿದೆ. ಹಾಗಂತ ಇದು ಸರ್ಕಾರಕ್ಕೆ ಹಿನ್ನಡೆ ಅಂತ ಅಲ್ಲ ಎಂದು ತಿಳಿಸಿದರು.
ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಯಾವ ರೀತಿ ತೀರ್ಮಾನ ಆಗಲಿದೆ ಎಂಬುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಅದು ಕಾಂಗ್ರೆಸ್ ಅಥವಾ ಬಿಜೆಪಿ ಇರಬಹುದು. ಹೈಕಮಾಂಡ್ನದ್ದೇ ಅಂತಿಮ ತೀರ್ಮಾನ. ಮುಖ್ಯಮಂತ್ರಿ ಮುಂದುವರೆಯಬೇಕೆಂಬುದು ನಮ್ಮ ಆಸೆ, ಅದರಲ್ಲಿ ತಪ್ಪೇನಿದೆ. ಆಸೆ ಇದ್ದರೂ ಹೈಕಮಾಂಡ್ ತೀರ್ಮಾನವೇ ಅಂತಿಮ. ಅದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇರಬಹುದು, ಎಲ್ಲವೂ ಅಷ್ಟೇ ಎಂದರು.



