ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೊಗಿದ್ದಾರೆ. ನಾಳೆ ಹೈಕೋರ್ಟ್ ಈ ನಿಟ್ಟಿನಲ್ಲಿ ವಿಚಾರಣೆ ನಡೆಸಲಿದ್ದು, ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿಯುತ್ತಾ ಅಥವಾ ತಿರಸ್ಕರಿಸುತ್ತಾ ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಹೌದು ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ಸಾಕ್ಷಿಯಾಗುವಂತಿದೆ. ಸದ್ಯ ಕೇಸ್ ಹೈಕೋರ್ಟ್ನಲ್ಲಿದ್ದು, ಗುರುವಾರ ಮತ್ತೆ ವಿಚಾರಣೆಗೆ ಬರಲಿದೆ. ಏನಾಗಲಿದೆ ಎಂಬ ಕುತೂಹಲ ಮೂಡಿದೆ. ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಆಗಸ್ಟ್ 31ಕ್ಕೆ ರಾಜ್ಯಪಾಲರ ನಡೆ ಖಂಡಿಸಿ, ರಾಜಭವನ ಚಲೋ ರ‍್ಯಾಲಿಗೆ ಕರೆ ನೀಡಿದ್ದಾರೆ. ಅತ್ತ ಸಿಎಂ ಸಿದ್ದರಾಮಯ್ಯ ಪರ ಶೋಷಿತ ಸಮುದಾಯಗಳು ಪ್ರತಿಭಟನೆ ನಡೆಸಿವೆ.
ಮುಡಾ ಹಗರಣದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಮಧ್ಯೆಯೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ರಾಜ್ಯಪಾಲರ ವಿರುದ್ಧ ಸಮರಕ್ಕೆ ಕರೆ ನೀಡಿದೆ. ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆ ಏನಾಗಲಿದೆ ಎಂಬುದರ ಮೇಲೆ ಕಾಂಗ್ರೆಸ್‌ನ ಮುಂದಿನ ಹೋರಾಟ ನಿಂತಿದೆ.