HomeSports NewsIPL 2025: ಇಂದು RCB vs LSG ನಡುವೆ ಹೈ-ವೋಲ್ಟೇಜ್ ಮ್ಯಾಚ್: ಆರ್ ಸಿಬಿ ಪ್ಲೇಯಿಂಗ್...

IPL 2025: ಇಂದು RCB vs LSG ನಡುವೆ ಹೈ-ವೋಲ್ಟೇಜ್ ಮ್ಯಾಚ್: ಆರ್ ಸಿಬಿ ಪ್ಲೇಯಿಂಗ್ 11 ಹೀಗಿದೆ ನೋಡಿ

For Dai;y Updates Join Our whatsapp Group

Spread the love

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ಆರ್‌ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಐಪಿಎಲ್ 2025 ರ 70ನೇ ಮತ್ತು ಅಂತಿಮ ಲೀಗ್ ಪಂದ್ಯ ನಡೆಯಲಿದೆ. ಆರ್‌ಸಿಬಿ ಲಕ್ನೋ ವಿರುದ್ಧ ಗೆದ್ದರೆ ಅಗ್ರ ಎರಡರಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

ಆದರೆ ಲಕ್ನೋ ವಿರುದ್ಧ ಆರ್​ಸಿಬಿ ಸೋತರೆ ಎಲಿಮಿನೇಟರ್ ಪಂದ್ಯವನ್ನು ಆಡಬೇಕಾಗುತ್ತದೆ. ಇದಕ್ಕೆ ಪೂರಕವಾಗಿ ಲಕ್ನೋ ತಂಡ ಉತ್ತಮ ಫಾರ್ಮ್‌ನಲ್ಲಿದ್ದು ಕಳೆದ ಪಂದ್ಯವನ್ನು ಗೆದ್ದು ಬರುತ್ತಿದ್ದರೆ, ಆರ್​ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಸೋತು ಬರುತ್ತಿದೆ.

ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದುವರೆಗೆ ಒಟ್ಟು 21 ಐಪಿಎಲ್ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡ 9 ಪಂದ್ಯಗಳನ್ನು ಗೆದ್ದಿದ್ದರೆ, ಗುರಿಯನ್ನು ಬೆನ್ನಟ್ಟಿದ ತಂಡ 11 ಪಂದ್ಯಗಳನ್ನು ಗೆದ್ದಿದೆ.

ಐಪಿಎಲ್‌ನಲ್ಲಿ ಇಲ್ಲಿಯವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ 5 ಪಂದ್ಯಗಳು ನಡೆದಿದ್ದು, ಆರ್‌ಸಿಬಿ ತಂಡ 3 ಪಂದ್ಯಗಳನ್ನು ಗೆದ್ದರೆ, ಲಕ್ನೋ ಸೂಪರ್ ಜೈಂಟ್ಸ್ ಎರಡು ಪಂದ್ಯಗಳನ್ನು ಗೆದ್ದಿದೆ. ಇಬ್ಬರ ನಡುವಿನ ಕೊನೆಯ ಪಂದ್ಯ 2024 ರಲ್ಲಿ ನಡೆದಿತ್ತು. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಏಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಅವೇಶ್ ಖಾನ್, ಆಕಾಶ್ ದೀಪ್, ರವಿ ಬಿಷ್ಣೋಯ್, ವಿಲ್ ಓ’ರೂರ್ಕ್.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!