ಕಲಬುರಗಿ: ರಾಜ್ಯದಲ್ಲಿ ಅತಿ ವೇಗವಾಗಿ ತಾಪಮಾನ ಏರಿಕೆಯಾಗುತ್ತಿದ್ದು, ಅತೀ ಹೆಚ್ಚಿನ ಬಿಸಿಲು ರಾಜ್ಯದಲ್ಲಿಯೇ ಕಲಬುರಗಿ ನಂಬರ್ ಒನ್ ಆಗಿ ಹೊರಹೊಮ್ಮಿದೆ. ಕಲಬುರಗಿಯ ಚಿಂಚೋಳಿ ಭಾಗದಲ್ಲಿ ದಾಖಲಾಗಿದೆ 42.8 ಉಷ್ಣಾಂಶ ದಾಖಲಾಗಿದೆ.
ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದಿಂದ ಮಾಹಿತಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ದಾಖಲೆಯ ಉಷ್ಣಾಂಶ ಕಲಬುರಗಿ ಜಿಲ್ಲೆಯ ಐನಾಪೂರ ಹೋಬಳಿಯಲ್ಲಿ ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ ಬಿಸಿಲು ಏರಿಕೆಯಾಗುತ್ತಿದ್ದು, ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ. ಅದಲ್ಲದೆ ಬೆಳಗ್ಗೆ 9 ಗಂಟೆ ನಂತರ ಮನೆಯಿಂದ ಹೊರಗೆ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ.



