ಖಾಸಗಿ ಮೆಡಿಕಲ್‌ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್‌ ಆದೇಶ ಸ್ವಾಗತಾರ್ಹ: ಆರ್‌.ಅಶೋಕ್

0
Spread the love

ಬೆಂಗಳೂರು: ಜನೌಷಧಿ ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್‌ ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸುತ್ತೇನೆ. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳ ಸ್ಥಗಿತದ ಬಗ್ಗೆ ಹೈಕೋರ್ಟ್‌ ಮಧ್ಯಂತರ ತಡೆ ಆದೇಶ ನೀಡಿದೆ. ಈ ಕುರಿತು ಬಿಜೆಪಿಯಿಂದ ಹೋರಾಟ ಮಾಡಲಾಗಿತ್ತು. ಖಾಸಗಿ ಮೆಡಿಕಲ್‌ ಫಾರ್ಮಾಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಿತ್ತು. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ. ಇನ್ನಾದರೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಜನರಿಗೆ ಏನು ಬೇಕೆಂದು ಅರಿತು ಕೆಲಸ ಮಾಡಬೇಕಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ 260-270 ಔಷಧಿಗಳನ್ನು ನೀಡಬೇಕಾಗುತ್ತದೆ. ಆದರೆ ಅಷ್ಟೊಂದು ಔಷಧಿ ಇಲ್ಲ. ಔಷಧಿಗಳು ಜನೌಷಧಿ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಇತ್ತೀಚೆಗೆ ಹಾಸನ ಆಸ್ಪತ್ರೆಗೆ ಹೋದಾಗ ಒಬ್ಬರೇ ಹೃದ್ರೋಗ ತಜ್ಞ ವೈದ್ಯರು ಇರುವುದು ಕಂಡುಬಂತು. ಹೃದಯ ಸಂಬಂಧಿ ರೋಗದ ತುರ್ತು ಪರಿಸ್ಥಿತಿಯಲ್ಲಿ ಅವರು ಇಂಜೆಕ್ಷನ್‌ ಕೊಟ್ಟು ಬೆಂಗಳೂರಿಗೆ ಕಳಿಸುತ್ತಾರೆ. ಇಂತಹ ಸ್ಥಿತಿಯಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಬಹಳ ಸಮಸ್ಯೆಯಾಗುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here