HomeGadag Newsಮೇಕೆದಾಟು ಯೋಜನೆಗಾಗಿ ಪಾದಯಾತ್ರೆ

ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮೇಕೆದಾಟು ಯೋಜನೆ ಹಾಗೂ ಮಹಾದಾಯಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಮಾ.21ರಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದಿಂದ ರಾಮನಗರ ಜಿಲ್ಲೆಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ ಬೇಲೂರ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕನಕಪುರ ತಾಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಆಣೆಕಟ್ಟು ಯೋಜನೆ ಜಾರಿಗೊಳಿಸಲು ಆಗ್ರಹಿಸಿ ರಾಮನಗರದ ಕೆಂಪೇಗೌಡ ವೃತ್ತದಿಂದ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಪಾದಯಾತ್ರೆ ಕೈಗೊಂಡು, ಯೋಜನೆ ಜಾರಿಗೆ ಆಗ್ರಹಿಸಿ ಹಕ್ಕೊತ್ತಾಯ ಮಾಡಲಾಗುತ್ತದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭಾ ಚುನಾವಣೆಗೂ ಮುಂಚೆ ಯೋಜನೆ ಜಾರಿಗಾಗಿ ಮೇಕೆದಾಟುವಿನಿಂದ ಬೆಂಗಳೂರಿನವರಿಗೆ ಪಾದಯಾತ್ರೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ನಂತರ ಅವರದೇ ಪಕ್ಷದ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಇದುವರೆಗೂ ಯೋಜನೆ ಜಾರಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಕಮಿಟಿ ಹಾಗೂ ಸರ್ವ ಜಿಲ್ಲಾ ಘಟಕದಿಂದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿಲಿದ್ದಾರೆ. ಜಿಲ್ಲೆಯಿಂದ ಸುಮಾರು 300 ಜನ ಕಾರ್ಯಕರ್ತರು ಭಾಗವಹಿಸುತ್ತಾರೆ. ಮಾ.22ರಂದು ವಿಧಾನಸಭೆ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ, ಪರಶುರಾಮ, ದಾವಲಸಾಬ ಮುಳಗುಂದ, ಶ್ರೀನಿವಾಸ ಭಂಡಾರಿ, ತಿಮ್ಮಣ್ಣ ಡೋಣಿ, ಮಂಜುನಾಥ, ಸಹದೇವ, ಹನುಮಂತ ಸೇರಿದಂತೆ ಇತತರು ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!