ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತದ ನಂತರ ದಿನದಿಂದ ದಿನಕ್ಕೆ ನಾಪತ್ತೆಯಾದವರ ಹೆಸರು ಹೊರಬರುತ್ತಿದೆ. ಈಗಾಗಲೇ 7 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇಂದು ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ ಪಡೆ ಆಗಮಿಸಿದೆ. ಬೆಳಗಾವಿಯಿಂದ ಮಿಲಿಟರಿ ಪಡೆ ಆಗಮಿಸಿದ್ದು,
ಮಣ್ಣಿನಡಿ ಸಿಲುಕಿಕೊಂಡಿರುವವರ ರಕ್ಷಣಾಕಾರ್ಯಾಚರಣೆ ನಡೆಸಲಾಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಮಾನ್ಯ ಮಿಲಿಟರಿ ಪಡೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು , ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಮಿಲಿಟರಿ ಪಡೆಯನ್ನು ಕಳುಹಿಸಿದ್ದು ಈ ಪಡೆಯು ಶಿರೂರಿಗೆ ತಲುಪಿದ್ದು, ಈ ಬಗ್ಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.



