ಗುಡ್ಡ ಕುಸಿತ ಪ್ರಕರಣ: ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ – ಸಿದ್ದರಾಮಯ್ಯ

0
Spread the love

ಉತ್ತರ ಕನ್ನಡ: ಶಿರೂರು ಬಳಿ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 10 ಮಂದಿಯನ್ನು ಬಲಿ ಪಡೆದಿರುವ ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,

Advertisement

ಜುಲೈ 16ರಂದು ಮಳೆಯಿಂದ ಶಿರೂರು ಬಳಿ ಗುಡ್ಡ ಕುಸಿದಿದೆ. ದುರಂತದಲ್ಲಿ 10 ಜನ ಸಾವನ್ನಪ್ಪಿದ್ದಾರೆ. ಈವರೆಗೆ 7 ಜನ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದರು. ಇನ್ನು ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಗುಡ್ಡ ಕುಸಿದಿರುವ ಆರೋಪ ಕೇಳಿಬಂದಿದ್ದು,

ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆ. ರಕ್ಷಣಾ ಕಾರ್ಯಾಚರಣೆ ಮುಕ್ತಾಯ ಬಳಿಕ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆಯನ್ನು ವಿಳಂಬ ಮಾಡಿಲ್ಲ. ಕೇರಳದ ಒಬ್ಬ ನಾಪತ್ತೆಯಾಗಿದ್ದಾನೆ, ಹೀಗಾಗಿ ಕೇರಳದವರು ಬಂದಿದ್ದಾರೆ. ಗುಡ್ಡು ಕುಸಿದಿರುವ ಎಲ್ಲಾ ಕಡೆ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ. ನೈಸರ್ಗಿಕ ವಿಪತ್ತು ಸಂಭವಿಸಿದೆ, ಯಾರ ವಿರುದ್ಧವೂ ಆರೋಪ ಮಾಡಲ್ಲ. ಈ ವಿಚಾರದಲ್ಲಿ ರಾಜಕೀಯವೂ ಮಾಡಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಟೀಕೆಗೆ ಟಾಂಗ್ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here