Home India News ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಸ್ಸಾಂ ಸಿಎಂ: ಸತತ ಎರಡನೇ ಬಾರಿ ಅಧಿಕಾರ ಸ್ವೀಕಾರ

ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಸ್ಸಾಂ ಸಿಎಂ: ಸತತ ಎರಡನೇ ಬಾರಿ ಅಧಿಕಾರ ಸ್ವೀಕಾರ

0
ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಸ್ಸಾಂ ಸಿಎಂ: ಸತತ ಎರಡನೇ ಬಾರಿ ಅಧಿಕಾರ ಸ್ವೀಕಾರ
Spread the love

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅಸ್ಸಾಂ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಗುವಾಹಟಿಯ ಖಾನಾಪಾರಾದ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವಾ ಶರ್ಮಾ ಹಾಗೂ ಅವರ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು.

ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು. ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ನಾಲ್ವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇವರಲ್ಲಿ ಬಿಜೆಪಿಯ ಅಜಂತಾ ನಿಯೋಗ್ ಮತ್ತು ರಾಮೇಶ್ವರ್ ತೇಲಿ, ಅಸ್ಸಾಂ ಗಣ ಪರಿಷತ್‌ನ ಅತುಲ್ ಬೋರಾ ಹಾಗೂ ಬೊಡೋ ಪೀಪಲ್ಸ್ ಫ್ರಂಟ್‌ನ ಚರಣ್ ಬೋರೋ ಸೇರಿದ್ದಾರೆ.

ಸತತ ಎರಡನೇ ಬಾರಿಗೆ ಅಸ್ಸಾಂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ಕಾಂಗ್ರೆಸ್ಸೇತರ ನಾಯಕ ಎಂಬ ಹೆಗ್ಗಳಿಕೆಗೆ ಹಿಮಂತ ಬಿಸ್ವಾ ಶರ್ಮಾ ಪಾತ್ರರಾಗಿದ್ದಾರೆ.

ಇತ್ತೀಚೆಗೆ ನಡೆದ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಪ್ರದರ್ಶನ ನೀಡಿದ್ದು, ಒಟ್ಟು 126 ಕ್ಷೇತ್ರಗಳ ಪೈಕಿ 102 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಪಡೆದಿತ್ತು.

ಈ ಭಾರೀ ಗೆಲುವಿನ ಬೆನ್ನಲ್ಲೇ ಹೊಸ ಸರ್ಕಾರ ರಚನೆಯಾಗಿದ್ದು, ಮತ್ತೊಮ್ಮೆ ಹಿಮಂತ ಬಿಸ್ವಾ ಶರ್ಮಾ ನೇತೃತ್ವಕ್ಕೆ ಜನಮಂಡೇಟ್ ದೊರೆತಿದೆ.


Spread the love

LEAVE A REPLY

Please enter your comment!
Please enter your name here