ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಹಾವಳಿ ಹನುಮಂತದೇವರ ದೇವಸ್ಥಾನದ ಹತ್ತಿರ ಸ್ಥಾಪಿಸಲಾಗಿದ್ದ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಮಂಗಳವಾರ ಅದ್ಧೂರಿಯಾಗಿ ನೆರವೇರಿತು.
ದೇವಸ್ಥಾನದಿಂದ ಪ್ರಾರಂಭವಾಗಿ ವಿದ್ಯಾರಣ್ಯ ವೃತ್ತದಿಂದ ಪಂಪ ವೃತ್ತ, ಕೋರ್ಟ್ ಸರ್ಕಲ್, ಭರಮದೇವರ ವೃತ್ತ, ಪಾದಗಟ್ಟಿ ಮೂಲಕ ಸಾವಿರಾರು ಜನರ ಜಯಘೋಷಗಳೊಂದಿಗೆ ವಿಸರ್ಜನೆ ಮಾಡಲಾಯಿತು. ಗಣೇಶ ಮಂಡಳಿಯವರು ಮೆರವಣಿಗೆಯ ಹಿನ್ನೆಲೆ ಒಂದೇ ಧಿರಿಸು ಹಾಗೂ ಕೆಸರಿ ಪೇಟ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.
‘ಹಿಂದೂ ಫೈರ್ ಬ್ರ್ಯಾಂಡ್’ ಎಂದೇ ಹೆಸರಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗಮಿಸುತ್ತಾರೆ ಎಂಬ ಪ್ರಚಾರದ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಜನರು ಸೇರಿದ್ದರು. ಮುಂಜಾಗೃತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.



