ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಪಟ್ಟಣದಲ್ಲಿ ಹಿಂದೂ ಮಹಾಗಣಪತಿ ಮೂರ್ತಿ ವಿಸರ್ಜನಾ ಮಹೋತ್ಸವ ಮಂಗಳವಾರ ಅದ್ದೂರಿಯಾಗಿ ಜರುಗಿತು. ವಿಶ್ವಹಿಂದೂ ಪರಿಷತ್, ಭಜರಂಗದಳ ವತಿಯಿಂದ ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನ ಪಕ್ಕದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.
Advertisement
11 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೊನೆಯ ದಿನ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಪಟ್ಟಣದ ಹರಿಹರ ಸರ್ಕಲ್‌ನಿಂದ ಪ್ರಾರಂಭವಾದ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ಪಟ್ಟಣದ ಇಜಾರಿ ಶಿರಸಪ್ಪ ವೃತ್ತ, ಹಳೇ ಬಸ್ ನಿಲ್ದಾಣ ಹಾಗೂ ಐಬಿ ವೃತ್ತದ ಮೂಲಕ ಸಾಗಿ ನಾಯ್ಕನ ಕೆರೆಯಲ್ಲಿ ಗಣಪತಿ ವಿಸರ್ಜನೆ ಮಾಡಲಾಯಿತು.