ಪಿಎಸ್‌ಐ ಈರಣ್ಣ ರಿತ್ತಿ ವರ್ಗಾವಣೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಒಕ್ಕೂಟದ ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಶಿರಹಟ್ಟಿ ಪಿಎಸ್‌ಐ ಈರಣ್ಣ ರಿತ್ತಿ ಅವರನ್ನು ವರ್ಗಾಯಿಸಿ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಸೋಮವಾರ ಶಿರಹಟ್ಟಿಯಲ್ಲಿ ರಾಜ್ಯ ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಸೀಲ್ದಾರ ರಾಘವೇಂದ್ರರಾವ್ ಕೆ ಅವರ ಮೂಲಕ ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ರಾಜೂ ಖಾನಪ್ಪನವರ, ಸಂತೋಷ ಕುರಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಿದೆ. ಸರಕಾರ ಹಿಂದೂಗಳ ಮೇಲೆ ವಿವಿಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಹಿಂದೂಗಳನ್ನು ಸದೆಬಡಿಯಲು ಪ್ರಯತ್ನಿಸುತ್ತಿದೆ. ಜಿಲ್ಲೆಯಾದ್ಯಂತ ಮುಗ್ಧ ಹಿಂದೂಗಳು ಸರಕಾರಿ ಅಧಿಕಾರಿಗಳ ದೌರ್ಜನ್ಯದಿಂದ ನಲುಗಿದ್ದಾರೆ. ನ. 10ರಂದು ಶಿರಹಟ್ಟಿಯ ಪಿಎಸ್‌ಐ ಈರಣ್ಣ ರಿತ್ತಿ ದೇವಿಹಾಳ ತಾಂಡಾದ ಅಮಾಯಕ ಸೋಮಪ್ಪ ಲಮಾಣಿ ಎಂಬ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಥಳಿಸಿದ್ದಾರೆ. ಈ ಅಧಿಕಾರಿಯ ಥಳಿತದಿಂದ ಸೋಮಪ್ಪ ಲಮಾಣಿಯ ಮರ್ಮಾಂಗಕ್ಕೆ ತೀವ್ರ ಗಾಯವಾಗಿದೆ.

ಮುಗ್ಧ ಲಂಬಾಣಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜಾತಿಯಿಂದನೆ ಮಾಡಿರುವ ಜನವಿರೋಧಿ, ಹಿಂದೂ ವಿರೋಧಿಯಾಗಿರುವ ಶಿರಹಟ್ಟಿ ಪಿಎಸ್‌ಐ ಈರಣ್ಣ ರಿತ್ತಿ ಅವರನ್ನು ಜಿಲ್ಲೆಯದಿಂದ ವರ್ಗಾಯಿಸಲು ಸರಕಾರಕ್ಕೆ ಶಿಫಾರಸ್ಸು ಮಾಡಬೇಕು. ವಾರದೊಳಗಾಗಿ ಯಾವುದೇ ಕ್ರಮ ಜರುಗಿಸದಿದ್ದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ, ಅಹೋರಾತ್ರಿ ಧರಣಿ, ರಸ್ತೆ ತಡೆ, ಉಪವಾಸದಂತಹ ಹೋರಾಟಗಳನ್ನು ವಿವಿಧ ಹಿಂದೂ ಸಂಘಟನೆಗಳ ಸಹಯೋಗದಲ್ಲಿ ಕೈಗೊಳ್ಳಲಾಗುವುದೆಂದು ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಣೇಶ ವ್ಯಾಪಾರಿ, ಮುತ್ತು ಕರ್ಜಕ್ಕಣ್ಣವರ, ಚಿನ್ನು ಹಾಳದೋಟದ, ಹನುಮಂತ ರಾಮಗೇರಿ, ಮುತ್ತು ಗೊಜನೂರ, ಅಜಯ ಬಳಗನ್ನವರ, ವೆಂಕಟೇಶ ದೊಡ್ಡಮನಿ, ವಿಶಾಲ ಗೋಕಾವಿ, ಸಾಗರ್ ಹುಯಿಲಗೋಳ, ಸೋಮಪ್ಪ ಲಮಾಣಿ, ಗಂಗವ್ವ ಲಮಾಣಿ, ಗೀತವ್ವ ಲಮಾಣಿ, ಸೋಮು ಬಂಡಿವಡ್ಡರ, ರವಿ ಲಮಾಣಿ, ರಮೇಶ ಲಮಾಣಿ, ಪರಶುರಾಮ ಜಲ್ಲಿಗೇರಿ, ನೀಲಪ್ಪ ಸಿಪಾಯಿ, ಹನುಮಂತ ಶಿರಹಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇದೇ ಈರಣ್ಣ ರಿತ್ತಿ ಕಳೆದ ವರ್ಷದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಶಾಂತಿಯುತವಾಗಿ ದುರ್ಗಾಮೂರ್ತಿಯನ್ನು ವಿಸರ್ಜನೆ ಮಾಡಿ ಮನೆಗೆ ವಾಪಸ್ಸಾಗುತ್ತಿದ್ದ ಗೋಸಾವಿ ಜನಾಂಗದ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು. ಇದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದಾಗ ಅಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅವರನ್ನು ಬೆಳಗಾವಿಗೆ ವರ್ಗಾಯಿಸಿದ್ದರು ಎಂದು ರಾಜೂ ಖಾನಪ್ಪನವರ ತಿಳಿಸಿದರು.


Spread the love

LEAVE A REPLY

Please enter your comment!
Please enter your name here