HomeGadag Newsಫೆ. 28ರಂದು ಹಿಂದೂ ಸಮಾಜೋತ್ಸವ, ಶೋಭಾಯಾತ್ರೆ

ಫೆ. 28ರಂದು ಹಿಂದೂ ಸಮಾಜೋತ್ಸವ, ಶೋಭಾಯಾತ್ರೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದೂ ಹಬ್ಬಗಳು ಹಾಗೂ ಮಹಾಪುರುಷರ ಜಯಂತ್ಯುತ್ಸವ ಆಚರಣೆ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸುವ ಮನಸ್ಥಿತಿ ದೇಶದಲ್ಲಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಾತಿ, ಮತ, ಪಂಥ, ಪ್ರಾಂತಗಳನ್ನು ಬದಿಗಿರಿಸಿ ಸಮಸ್ತ ಹಿಂದೂ ಸಮಾಜ ಬಾಂಧವರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ. 28ರ ಶನಿವಾರ ಗದಗ ನಗರದಲ್ಲಿ ಭವ್ಯ ಹಿಂದೂ ಸಮಾಜೋತ್ಸವವನ್ನು ಆಯೋಜಿಸಲಾಗಿದೆ ಎಂದು ಗದಗ ಶಿವಾನಂದ ಉಪನಗರ ಹಿಂದೂ ಸಮ್ಮೇಳನ ಸಮಿತಿ ಕಾರ್ಯದರ್ಶಿ ರಾಘವೇಂದ್ರ ಹಬೀಬ ಹೇಳಿದರು.

ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು, ಇತ್ತೀಚಿನ ದಿನಗಳಲ್ಲಿ ಹಿಂದೂಗಳನ್ನು ವಿರೋಧಿಸುವ ಮತ್ತು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಸಮಸ್ತ ಹಿಂದೂಗಳು ನಾವೆಲ್ಲ ಒಂದು ಎಂದಾದಾಗ ಸದೃಢ ಸಮಗ್ರ ಭಾರತ ನಿರ್ಮಾಣ ಸಾಧ್ಯವಾಗಲಿದ್ದು, ಸಮಾವೇಶ ಇದಕ್ಕೆ ಪೂರಕವಾಗಲಿದೆ ಎಂದರು.

ಫೆ. 28ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಗದಗ ನಗರದ ಮುಳಗುಂದ ರಸ್ತೆಯ ಶ್ರೀ ಅಂಬಾಭವಾನಿ ದೇವಸ್ಥಾನದಿಂದ ಬೃಹತ್ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದ್ದು, ತಾಯಿ ಭಾರತಾಂಭೆಯ ಜೊತೆಯಲ್ಲಿ ಮಹಾಪುರುಷರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳು ಶೋಭಾಯಾತ್ರೆಯಲ್ಲಿ ಇರಲಿವೆ. ಶೋಭಾಯಾತ್ರೆ ಮುಳಗುಂದನಾಕಾ, ತ್ರಿಕೂಟೇಶ್ವರ ದೇವಸ್ಥಾನ, ಜೋಡಮಾರುತಿ ದೇವಸ್ಥಾನ, ಪಟೇಲ ರಸ್ತೆ, ಬಸವೇಶ್ವರ ಸರ್ಕಲ್ ಮೂಲಕ ಸಭಾಸ್ಥಳ ವೀರಶೈವ ಜನರಲ್ ಲೈಬ್ರರಿ ಬಳಿ ಸಮಾರೋಪಗೊಳ್ಳಲಿದೆ.

ನಂತರ ಸಂಜೆ 6 ಗಂಟೆಗೆ ಜರುಗುವ ಹಿಂದೂ ಸಮಾಜೋತ್ಸವ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದು, ದಿಕ್ಸೂಚಿ ಭಾಷಣವನ್ನು ಜಗದೀಶ ಕಾರಂತ ಮಾಡಲಿದ್ದು, ಸಮಸ್ತ ಹಿಂದೂ ಸಮಾಜ ಬಾಂಧವರು ಶೋಭಾಯಾತ್ರೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ ಎಂದರು.

ಈ ಸಂದರ್ಭದಲ್ಲಿ ಅರುಣ ವೆರ್ಣೇಕರ, ಸೂರಜ ನಾಯ್ಕರ, ರಾಮಚಂದ್ರ ಪಾಲನಕರ, ರತ್ನಾ ಕುರುಗೋಡ, ಅಶ್ವಿನಿ ಜಗತಾಪ ಮುಂತಾದವರಿದ್ದರು.

ಹಿಂದೂ ಸಮಾಜೋತ್ಸವದ ಭವ್ಯ ಶೋಭಾಯಾತ್ರೆಯಲ್ಲಿ ಸಹಕುಟುಂಬ ಪರಿವಾರದೊಡನೆ ಹಾಗೂ ಸಾಂಸ್ಕೃತಿಕ ಉಡುಗೆ-ತೊಡುಗೆ ತೊಟ್ಟು ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಳ್ಳಲಿದ್ದು, ಚಿಕ್ಕಮಕ್ಕಳು ಸ್ವಾತಂತ್ರ್ಯ ಹೋರಾಟಗಾರರು ಮಹಾಪುರುಷರ ವೇಷಭೂಷಣ ಧರಿಸಿ ಪಾಲ್ಗೊಳ್ಳಲಿದ್ದಾರೆ.

  • ಅಶ್ವಿನಿ ಜಗತಾಪ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!